ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ  ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ –

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ  ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ –

ಮಧ್ಯರಾತ್ರಿ ಅಧಿಕೃತ ಆದೇಶ ಮಾಡಿದ ಜಿಲ್ಲಾಧಿಕಾರಿ

ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ತನಕದ ಶಿಕ್ಷಣ ಸಂಸ್ಥೆಗಳಿಗೆ ಜುಲೈ 18 ಗುರುವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಮಂಗಳೂರು,ಉಳ್ಳಾಲ, ಮೂಡಬಿದ್ರೆ,ಮೂಲ್ಕಿ ತಾಲೂಕುಗಳ ಶಾಲಾ‌ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ. ಎಂದಿನಂತೆ ತರಗತಿಗಳು ನಡೆಯಲಿದೆ

ರಾಜ್ಯ