ಉಪ್ಪಿನಂಗಡಿ ಏಕಾಎಕಿ ಚಲಿಸುತ್ತಿದ್ದ KSRTC ಐರಾವತ ಬಸ್ ನಲ್ಲಿ ಬೆಂಕಿ ; ತಪ್ಪಿದ ಅನಾಹುತ

ಉಪ್ಪಿನಂಗಡಿ ಏಕಾಎಕಿ ಚಲಿಸುತ್ತಿದ್ದ KSRTC ಐರಾವತ ಬಸ್ ನಲ್ಲಿ ಬೆಂಕಿ ; ತಪ್ಪಿದ ಅನಾಹುತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆ ಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18 ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡ ತಪ್ಪಿದೆ.

ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ಸಿನ ಹಿಂಬದಿಗೆ ಹಾನಿಯಾಗಿದೆ.

ರಾಜ್ಯ