
ಬಂಟ್ವಾಳ: ಮಂಗಳವಾರ ರಾತ್ರಿ ಬೀಸಿದ ಗಾಳಿ ಮತ್ತು ಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿಯಾದ ಬಗ್ಗೆ ವರದಿಯಾದರೆ, ಇಲ್ಲಿನ ಪೋಲೀಸ್ ಉಪವಿಭಾಗದ ಕಚೇರಿಯ ಮಾಡಿನ ಮೇಲೆ ತೆಂಗಿನ ಮರ ಬಿದ್ದು ಅಪಾರನಷ್ಟವುಂಟಾದ ಘಟನೆ ಬಗ್ಗೆ ತಡವಾಗಿ ಮಾಹಿತಿ ಲಭ್ಯವಾಗಿದೆ.


ಡಿ.ವೈ.ಎಸ್.ಪಿ ವಿಜಯಪ್ರಸಾದ್ ಅವರು ಕುಳಿತುಕೊಳ್ಳುವ ಕೊಠಡಿ ಮೇಲೆ ಕಚೇರಿಯ ಅಂಗಳದಲ್ಲಿದ್ದ ಹಳೆಯ ತೆಂಗಿನ ಮರ ಬಿದ್ದು ಹಂಚು ಹುಡಿಯಾಗಿದೆ.ಕಚೇರಿಯ ಒಳಗೆ ಮರದಲ್ಲಿದ್ದ ಸೀಯಾಳ ಮತ್ತು ತೆಂಗಿನಕಾಯಿ ಹಾಗೂ ಹಂಚುಗಳು ಹುಡಿಯಾಗಿ ಬಿದ್ದಿವೆ.ರಾತ್ರಿ ಸುಮಾರು 9.30 ರವೇಳಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಡಿ.ವೈ.ಎಸ್.ಪಿ.ಯವರು ಕಚೇರಿಯೊಳಗೆ ಇಲ್ಲದೆ ಇದ್ದರಿಂದ ಅಪಾಯ ತಪ್ಪಿದೆ.ಅವರು ಕೆಲವೇ ಕ್ಷಣದ ಹಿಂದೆ ಕಚೇರಿಯಿಂದ ಹೊರಟು ಹೋಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.ಇದೀಗ ಡಿ.ವೈ.ಎಸ್.ಪಿ.ಕಚೇರಿಯ ರಿಪೇರಿ ಕಾರ್ಯ ಭರದಿಂದ ಸಾಗುತ್ತಿದೆ