
ಪ್ಯಾರಿಸ್ : ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಬಿ ಗುಂಪಿನ ತ ನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ನ್ಯೂಝಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು.


ಪಂದ್ಯದ ಆರಂಭದಲ್ಲಿ ನ್ಯೂಝಿಲ್ಯಾಂಡ್ 8ನೇ ನಿಮಿಷದಲ್ಲಿ 1-0 ಮುನ್ನಡೆ ಪಡೆಯಿತು. 24ನೇ ಹಾಗೂ 34ನೇ ನಿಮಿಷದಲ್ಲಿ ಗೋಲು ಗಳಿಸಿದ ಭಾರತ 2-1 ಮುನ್ನಡೆ ಸಾಧಿಸಿತು. 53ನೇ ನಿಮಿಷದಲ್ಲಿ ಗೋಲು ಗಳಿಸಿದ ಕಿವೀಸ್ ಸ್ಕೋರನ್ನು 2-2ರಿಂದ ಸಮಬಲಗೊಳಿಸಿತು. 59ನೇ ನಿಮಿಷದಲ್ಲಿ ಗೆಲುವಿನ ಗೋಲು ಗಳಿಸಿದ ನಾಯಕ ಹರ್ಮನ್ಪ್ರೀತ್ ಸಿಂಗ್ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು.
ಭಾರತವು ಜುಲೈ 29ರಂದು ಬಿ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಅರ್ಜೆಂಟೀನ ತಂಡವನ್ನು ಎದುರಿಸಲಿದೆ