
ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ ಘಟನೆ ಜು.31 ರಂದು ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಬನಿಲ್ದಾಣದಲ್ಲಿ ನಡೆದಿದೆ.



ಸುಳ್ಯದಿಂದ ಕೊಯ್ನಾಡು ತೆರಳುವ ಪ್ರಯಾಣಿಕರು ಬಸ್ಸಿನಲ್ಲಿ ಕುಳಿತಿದ್ದರು. ಈ ಸಂದರ್ಭ ಬಸ್ಸಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕೂಡಲೇ
ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.ಇದರಿಂದ ಸಂಭಾವ್ಯ ಭಾರೀ ಅಪಾಯ ತಪ್ಪಿದಂತಾಗಿದೆ.
