ಉಳ್ಳಾಲ:ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತಿಕಾರ, ಆರೋಪಿ ಸಮೀರ್ ಬರ್ಬರ ಹತ್ಯೆ..!

ಉಳ್ಳಾಲ:ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತಿಕಾರ, ಆರೋಪಿ ಸಮೀರ್ ಬರ್ಬರ ಹತ್ಯೆ..!

ಉಳ್ಳಾಲ :  ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ.

ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು ಬಳಿಯ ಫಾಸ್ಟ್ ಫುಡ್ ಅಂಗಡಿಯೊಂದಕ್ಕೆ ಬಂದಿದ್ದು,  ಕೊಲೆಗಾಗಿ ಹೊಂಚು ಹಾಕಿದ್ದ ದುಷ್ಕರ್ಮಿಗಳ ತಂಡ ಈತನ ವಾಹನವನ್ನೇ ಹಿಂಬಾಲಿಸಿಕೊಂಡು ಬಂದು ಕೊಲೆ ಕೃತ್ಯವೆಸಗಿರುವುದು ತಿಳಿದು ಬಂದಿರುತ್ತದೆ. ಘಟನೆಯ ಬಳಿಕ ತಂಡ ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ. ಸುಮಾರು 3-4 ಮಂದಿ ಅಪರಿಚಿತ ದುಷ್ಕರ್ಮಿಗಳು ತಲವಾರು, ಮಾರಕಾಯುಧಗಳಿಂದ ಹಲ್ಲೆ ನಡೆಸಿ ಸಮೀರ್ ನನ್ನು ಕೊಲೆ ಮಾಡಿರುವ ಬಗ್ಗೆ ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ಅಪಾಯವನ್ನು ಅರಿತ ಸಮೀರ್​ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್​ನಿಂದ 500 ಮೀಟರ್​ ದೂರದಲ್ಲಿರುವ ವಿ.ಕೆ. ಫರ್ನಿಚರ್​ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದೆ. 2018 ರಲ್ಲಿ ರೌಡಿಶೀಟರ್ ಟಾರ್ಗೆಟ್​ ಇಲ್ಯಾಸ್​ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಸಮೀರ್, ರಿಯಾಝ್, ನಮೀರ್​, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್​ ಆಲಿ ಎಂಬವರು ಸೇರಿಕೊಂಡು ಕೊಲೆ ಮಾಡಿದ್ದರು.

ರಾಜ್ಯ