ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.

ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು

ರಾಜ್ಯ