
ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದ್ದು, ಇವತ್ತು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ತಿಳಿಸಿದ್ದಾರೆ. ಅಭಯ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ

ಅಭಯ್ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿರುತ್ತದೆ.
ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಳ್ಳುತ್ತೇವೆ. ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ
