ಇನ್ನೋವಾ ಕಾರು-ಬೈಕ್ ಡಿಕ್ಕಿ : ಶಿವಮೊಗ್ಗ ಮೂಲದ ಬೈಕ್ ಸವಾರ ಮೃತ್ಯು.

ಇನ್ನೋವಾ ಕಾರು-ಬೈಕ್ ಡಿಕ್ಕಿ : ಶಿವಮೊಗ್ಗ ಮೂಲದ ಬೈಕ್ ಸವಾರ ಮೃತ್ಯು.

ನೂಜಿಬಾಳ್ತಿಲ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಚಿಲಂಪಾಡಿಯ ನೂಜಿಬಾಳ್ತಿಲದಲ್ಲಿ ಇಂದು ಸಂಜೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಮೃತಪಟ್ಟವರು.

ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ವಾಹನವನ್ನು ನೋಡಿ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ. ಈ ವೇಳೆ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ದೇವರಾಜ್‌ ನನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ

ರಾಜ್ಯ