ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 

ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 

ಬಿ.ಸಿ.ರೋಡ್ : ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಬೀಕರ  ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ  ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.  ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯ