
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭವು ಸೆ.10ರಂದು ನಡೆಯಲಿದ್ದು

ನೂತನ ಸಭಾಭವನವನ್ನು ಉದ್ಘಾಟಿಸಲು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೆರಾಜೆಗೆ ಆಗಮಿಸಲಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಯಕ್ರಮವು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ, ಸಂಸ್ಥೆಯ ನೂತನ ಕಛೇರಿಯನ್ನು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೊಂಡದೇರ ಗಣಪತಿ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಮಂಗಳೂರು ಕ್ಯಾಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ, ಕೊಡಗು ಸಹಕಾರ ಸಂಘದ ಉಪನಿಬಂಧಕ ವಿಜಯಕುಮಾರ್, ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಾಲಚಂದ್ರ, ಕೊಡಗು ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಪೆರಾಜೆ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ.ಎಂ., ಗ್ರಾ.ಪಂ. ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಅವರು ಉಪಸ್ಥಿತರಿರಲಿದ್ದಾರೆ ಸಂಸ್ಥೆ ಎಂದು ತಿಳಿಸಿದೆ.
