
ಸೆ.17 ರಂದು ಸುಳ್ಯ ಭಾರತೀಯ ಮಜ್ದೂರ್ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಟ್ಟಡ ಕಾರ್ಮಿಕರ ಸಮಾವೇಶ , ಹಿರಿಯ ಕಟ್ಟಡ ಕಾರ್ಮಿಕರಿಗೆ ಗೌರವಾರ್ಪಣೆ , ಹಾಗೂ ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಮತ್ತ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ಕಟ್ಟಡ ಕಾರ್ಮಿಕರವಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಳ್ಯ ಅಮೃತ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಆರಂಭದಲ್ಲಿ ಬೆಳಿಗ್ಗೆ 10 ಗಂಟೆಗೆ ಸುಳ್ಯನಗರದ ಗಾಂಧಿನಗರದಿಂದ ಜ್ಯೋತಿ ವೃತ್ತದ ವರೆಗೆ ಮೆರವಣಿಗೆ ನಡೆಯಲಿದೆ ಎಲ್ಲಾ ಕಾರ್ಮಿಕರಿಗೆ ಮದ್ಯಾಹ್ನ ಸಹಬೋಜನ ವ್ಯವಸ್ಥೆ ಮಾಡಲಗಿದ್ದು ತಾಲೋಕಿನ ಎಲ್ಲಾ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಘಟನೆ ವಿನಂತಿಸಿದೆ.
