
ಬಾಗಮಂಡಲ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ .ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ.ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ.
