ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ 

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ 

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ

ರಾಜ್ಯ