ಸುಳ್ಯದಲ್ಲಿ ಭಾರತೀಯ ಮಜ್ದೂರ್ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ  ವಿಶ್ವಕರ್ಮ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ 

ಸುಳ್ಯದಲ್ಲಿ ಭಾರತೀಯ ಮಜ್ದೂರ್ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ  ವಿಶ್ವಕರ್ಮ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ 

ಸುಳ್ಯ ಸೆ 17 :ಕಾರ್ಮಿಕರು ಸಮಾಜದಲ್ಲಿ ಎಷ್ಟು ಮುಖ್ಯ, ಅವರ ಮುಖಾಂತರ ಸಮಾಜಕ್ಕೆ ಸಾಕಷ್ಟು ಪ್ರಮಾಣದಲ್ಲಿ ಸೇವೆಯನ್ನು ತನ್ನದೆ ಆದರೀತಿಯಲ್ಲಿ ನಿಸ್ವಾರ್ಥ ಸೇವೆ ಮಾಡುವಂತಹ ವರ್ಗದವರು, ಅವರ ಪ್ರಾಮುಖ್ಯತೆಯನ್ನು ತಿಳಿಸುವ ಪ್ರಯತ್ನ ನಾವೆಲ್ಲರೂ ಮಾಡಬೇಕಿದೆ ಈ ನಿಟ್ಟಿನಲ್ಲಿ ನಾವೆಲ್ಲರೂ  ಕೆಲಸಕಾರ್ಯಗಳನ್ನು ಮಾಡಬೇಕಿದೆ‌ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಅವರು ಸೆ.17 ರಂದು ಸುಳ್ಯ ಭಾರತೀಯ ಮಜ್ದೂರ್ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಹಮ್ಮಿಕೊಂಡ  ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಟ್ಟಡ ಕಾರ್ಮಿಕರ ಸಮಾವೇಶ , ಹಿರಿಯ ಕಟ್ಟಡ ಕಾರ್ಮಿಕರಿಗೆ  ಗೌರವಾರ್ಪಣೆ , ಕಾರ್ಮಿಕರವಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ  ದಲ್ಲಿಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ  ಅಧ್ಯಕ್ಷತೆಯನ್ನು ತಾಲೂಕು ಸಂಘದ ಅಧ್ಯಕ್ಷ ನಾರಾಯಣ ಜಿ.ಎನ್‌. ಅಧ್ಯಕ್ಷತೆ ವಹಿಸಿದ್ದರು.ಶಾಸಕಿ ಭಾಗೀರಥಿ ಮುರುಳ್ಯ ಹಿರಿಯ ಕಾರ್ಮಿಕರನ್ನು ಹಾಗೂ ಶೈಕ್ಷಣಿಕ ಸಾಧಕರನ್ನು ಗೌರವಿಸಿದರು.  ಕಾರ್ಮಿಕ ಸಮಾವೇಶದ ಮೆರವಣಿಗೆ ಉದ್ಘಾಟಿಸಿದ ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡ ಮಾತನಾಡಿ ದೇಶದ ಅಭಿವೃದ್ದಿಯಲ್ಲಿ ಕಾರ್ಮಿಕ ವರ್ಗದ ಶ್ರಮ ಬಹುಪಾಲಿದೆ  ,ಕಾರ್ಮಿಕ ವರ್ಗಕ್ಕೂ ಗೌರವ ಕೊಡುವ ಕೆಲಸವಾಗಬೇಕು,ಕಾರ್ಮಿಕರ ಮಕ್ಕಳು ಉತ್ತಮ ವಿದ್ಯಾಭ್ಯಾಸದೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸುಳ್ಯದ ಯೋಜನಾಧಿಕಾರಿ ಮಾಧವ ಗೌಡ ಮಾತನಾಡಿ ಕಾರ್ಮಿಕರು ದುಶ್ಚಟಗಳಿಂದ ದೂರವಿರಬೇಕು, ಈ ಮೂಲಕ ತಮ್ಮ ಮಕ್ಕಳಿಗೆ ತಾವೇ ಹೀರೋ ಅನಿಸಿಕೊಳ್ಳುವಂತೆ ಜೀವನ ನಡೆಸಬೇಕುಎಂದು ಕಿವಿ ಮಾತನ್ನಾಡಿದರು.

ವೇದಿಕೆಯಲ್ಲಿ ಸುಳ್ಯ ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ಸುಳ್ಯ ಇದರ ಗೌರವಾಧ್ಯಕ್ಷ ವೆಂಕಟ್ ವಳಲಂಬೆ, ಬಿ.ಎಂ.ಎಸ್. ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್,ಜಿಲ್ಲಾ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಯು., ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗಡೆ, ಇಂಜಿನಿಯರ್ ಗಳಾದ ಶ್ಯಾಮ್ ಪ್ರಸಾದ್, ದೇವಿಪ್ರಸಾದ್, ಸುಳ್ಯ.ಸಿ.ಎ. ಬ್ಯಾಂಕ್ ಅಧ್ಯಕ್ಷ ವಿಕ್ರಂ ಎ.ವಿ., ರಿಕ್ಷಾ ಯೂನಿಯನ್ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಇಂಜಿನಿಯರ್ ಆರೀಫ್ ಬೆಳ್ಳಾರೆ ವೇದಿಕೆಯಲ್ಲಿ ಇದ್ದರು. ಸಂಘಟನಾ ಕಾರ್ಯದರ್ಶಿ ಮಧುಸೂದನ್, ಪ್ರ.ಕಾರ್ಯದರ್ಶಿ ಮನೋಹರ, ಜತೆ ಕಾರ್ಯದರ್ಶಿ ಶಿವಾನಂದ ಪಾಟೀಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಶೆಟ್ಟಿ ‌ಮೊದಲಾದವರಿದ್ದರು.ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಮತ್ತ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ  ಕಟ್ಟಡ ಕಾರ್ಮಿಕರ ಮಕ್ಕಳನ್ನು ಮತ್ತು ಹಿರಿಯ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ರಾಜ್ಯ