ಕೊಡಗು | ಮಹಿಳೆಯ ಕೊಲೆ ಪ್ರಕರಣ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಓರ್ವ ಮಹಿಳೆಯನ್ನು ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ನಿವಾಸಿ ರಾಜೇಶ್(42)ಎಂಬಾತನೇ ಬಂಧನಕ್ಕೊಳಗಾದ ಆರೋಪಿ. ಆಸ್ತಿ ವಿಚಾರಕ್ಕಾಗಿ ಆತ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.…