ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ 

ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ 

ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು(ಅ.17) ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಭಕ್ತರಿಗೆ ದರ್ಶನ ನೀಡಿದ್ದಾಳೆ.

ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ಪ್ರಶಾಂತ್‌ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾವೇರಿ ಮಾತೆಗೆ ಆರತಿ ಬೆಳಗಿದರು.  ಭಾಗಮಂಡಲ-ತಲಕಾವೇರಿಯಲ್ಲಿ ಒಂದು ತಿಂಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.

ರಾಜ್ಯ