ಉಳ್ಳಾಲ: ರೈಲ್ವೇ ಹಳಿ ಮೇಲೆ ಕಲ್ಲುಗಳನ್ನಿರಿಸಿ ವಿದ್ವಾಂಸಕ ಕೃತ್ಯ..! ಮಧ್ಯ ರಾತ್ರಿಯ ಭಯಾನಕ ಶಬ್ದಕ್ಕೆ ಬೆಚ್ಚಿಬಿದ್ದ ಸ್ಥಳೀಯರು 

ಉಳ್ಳಾಲ: ರೈಲ್ವೇ ಹಳಿ ಮೇಲೆ ಕಲ್ಲುಗಳನ್ನಿರಿಸಿ ವಿದ್ವಾಂಸಕ ಕೃತ್ಯ..! ಮಧ್ಯ ರಾತ್ರಿಯ ಭಯಾನಕ ಶಬ್ದಕ್ಕೆ ಬೆಚ್ಚಿಬಿದ್ದ ಸ್ಥಳೀಯರು 

ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯರ ಮನೆಗಳಲ್ಲಿ ಕಂಪನದ ಅನುಭವ ಉಂಟಾಗಿದ್ದು, ಜನರು ಭಯಕ್ಕೆ ಕಾರಣವಾಗಿದೆ. ಬಾರಿ ಸದ್ದು ಉಂಟಾಗಿದ್ದರಿಂದ ಸ್ಥಳೀಯರು ಟಾರ್ಚ್ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ದುಷ್ಕರ್ಮಿಗಳು ಹಳಿಗಳ ಮೇಲೆ ಜಲ್ಲಿಕಲ್ಲಿನ ರಾಶಿ ಜೋಡಿಸಿ ಇಟ್ಟಿರುವುದು ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಇಬ್ಬರು ಹಳಿ ಮೇಳೆ ಸಂಚರಿಸುವುದು ಕಂಡಿದ್ದು, ಅವರೇ ಈ ಕೃತ್ಯ ಎಸಗಿರುವ ಶಂಕೆ ಇರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ

ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ರಾತ್ರಿ ವೇಳೆ ಸಿಸಿಟಿವಿ ಪರಿಶೀಲನೆ ಮಾಡಲಿಲ್ಲ. ಇದೀಗ ಎಂಜಿನಿಯರ್, ಅಧಿಕಾರಿಗಳು ಎಲ್ಲರ ಜತೆಗೆ ಸೇರಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತದೆ ಎಂದರು.

ಉಳ್ಳಾಲ ಪೊಲೀಸರು ಮತ್ತು ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಬಂದು ತಪಾಸಣೆ ನಡೆಸಿದರು.

ರಾಜ್ಯ