
ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆಯವರ ಶ್ರದ್ಧಾಂಜಲಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿಯವರು ದೀಪ ಬೆಳಗಿಸಿ ಶ್ರೀ ದಿವಾಕರ್ ಮುಂಡಾಂಜೆಯವರಿಗೆ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷರುಗಳಾದ ರೋಹನ್ ಪೀಟರ್, ದೇವರಾಮ ಬಾಳೆಕಜೆ, ಮಹಿಳಾ ಘಟಕದ ಅಧ್ಯಕ್ಷೆ ಮಹಾಲಕ್ಷ್ಮಿ ಕೊರಂಬಡ್ಕ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹಸೖನಾರ್, ಪ.ಜಾತಿ ಹಾಗೂ ಪ.ಪಂ. ಘಟಕದ ಅಧ್ಯಕ್ಷರಾದ ಎಂ.ಬಿ. ಚೋಮ, ರಾಮಚಂದ್ರಬಳ್ಳಡ್ಕ ಮತ್ತಿತರರು ಹಾಜರಿದ್ದರು. ಪಕ್ಷದ ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ರವರು ಎಲ್ಲರನ್ನು ಸ್ವಾಗತಿಸಿ ವಂದಿಸಿದರು.

