ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯರಿಗೆ ಜಾಮೀನು ಮಂಜೂರು 

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯರಿಗೆ ಜಾಮೀನು ಮಂಜೂರು 

ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಫೋಕ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಯಾಯರಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ.

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೆ.19 ರಂದು ಬೆಳ್ಳಾರೆ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಇದೀಗ ಪ್ರಸಾದ್ ಪಾಂಗ್ರಣ್ಯಾಯರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ. ಆರೋಪಿಯ ಪರವಾಗಿ ಪುತ್ತೂರಿನ  ವಕೀಲ ನರಸಿಂಹ ಪ್ರಸಾದ್ ಬಿ. ವಾದಿಸಿದ್ದರು.

ರಾಜ್ಯ