
ಕೊಣಾಜೆ: ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ
