
ಕರ್ನಾಟಕ ರಾಜ್ಯದ ಹತ್ತನೇ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ (92) ನಿಧನರಾಗಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘ ರಾಜಕಾರಣ ಮಾಡಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇಂದ್ರ ಸರ್ಕಾರದ ವಿದೇಶಾಂಗ ಮಂತ್ರಿಯಾಗಿ ಮಾತ್ರವಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಆ ಬಳಿಕ ರಾಜಕೀಯದ ನಿವೃತ್ತಿ ಅಂಚಿನಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಉನ್ನತ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ಆದರೆ ಶ್ವಾಸಕೋಶದ ಸೋಂಕು ಉಲ್ಬಣಗೊಂಡು ಕೊನೆ ಉಸಿರು ಎಳೆದಿದ್ದಾರೆ.ಮೃತರ ಪಾರ್ಥಿವ ಶರೀರವನ್ನು ಸದಾಶಿವನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.
