
ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.
ಬೆಳಗ್ಗೆ 6.45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7.15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ.ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ ಪರವಾನಗಿ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನಸ್ಪಂದನೆ ಲಭಿಸಿದೆ.
