
ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರ ಶನಿವಾರ ನಡೆದಿದೆ.


ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ದಿಡೀರ್ ದಾಳಿ ಮಾಡಿದೆ. ಅದೃಷ್ಟವಶಾತ್ ಮುತ್ತು ಓಡಿ ತಪ್ಪಿಸಿಕೊಂಡು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸ್ಕೂಟಿ ಜಖಂಗೊಂಡಿದೆ.
ಗಾಯಳುವನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.