ಪುತ್ತೂರು : ಬಸ್ಸು-ಬೈಕ್‌ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ತೀವ್ರ ಗಾಯ

ಪುತ್ತೂರು : ಬಸ್ಸು-ಬೈಕ್‌ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ತೀವ್ರ ಗಾಯ

ಪುತ್ತೂರು: ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜ.8ರಂದು ಬೆಳಗ್ಗೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರರನ್ನು ಬೆಳ್ಳಿಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ಪುತ್ತೂರಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ