
ವಿಟ್ಲ: ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಒಂದು ಸುತ್ತಿನ ವಿಚಾರಣೆ ನಡೆದಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕನಿಂದ ಈ ಕೃತ್ಯ ನಡೆದಿದೆ ಮತ್ತು 10ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ. ವಿಟ್ಲ ಪೊಲೀಸ್ ಠಾಣೆಗೂ ಹೆತ್ತವರು ದೂರು ನೀಡಿದ್ದಾರೆ.
