ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ: ಧನರಾಜ್ ಆಚಾರ್

ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ: ಧನರಾಜ್ ಆಚಾರ್

ಪುತ್ತೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಧನರಾಜ್ ಆಚಾರ್ಯ ನಿನ್ನೆ ಸಂಜೆ ಪುತ್ತೂರಿಗೆ ಆಗಮಿಸಿದ್ದಾರೆ.

ಮೊದಲಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸುಮಾರು 16 ವಾರಗಳ ಕಾಲ ಉಳಿದುಕೊಂಡು ಕೊನೇಯ ಹಂತದಲ್ಲಿ ಹೊರಬಂದಿದ್ದರು. ಬಹಳಷ್ಟು ಅಭಿಮಾನಿಗಳನ್ನ ತನ್ನ ಡೈಲಾಗ್ ಗಳ ಮೂಲಕವೇ ಮನರಂಜಿಸುತ್ತಿದ್ದರು.

ಬಿಗ್ ಬಾಸ್ ಮನೆಯಿಂದ ಆಚೆ ಬಂದ ಬಳಿಕ ಮೊದಲ ಬಾರಿದೆ ಪುತ್ತೂರಿಗೆ ಬಂದ ಧನರಾಜ್ ನೇರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು, ಈ ವೇಳೆ ಧನರಾಜ್ ಅವರನ್ನ ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಭಿನಂದಿಸಿದರು. ಈ ಸಂದರ್ಭ ಧನ್ ರಾಜ್ ಆಚಾರ್ಯ ಅವರ ತಂದೆ, ಸಹೋದರಿ ಮತ್ತು ಚಿಕ್ಕಪ್ಪ ಮತ್ತು ಅವರ ಆಪ್ತ ಬಳಗದವರು ಜೊತೆಗಿದ್ದರು.

ಇನ್ನು ಬಿಗ್ ಬಾಸ್ ನಿಂದ ಹೊರಬಂದ ಬಳಿಕ ಹಲವಾರು ಆಫರ್ ಗಳು ಹೊರಬಂದಿವೆ ಅಂತ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಸಿನೆಮಾ ಸೇರಿದಂತೆ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಿಂದ ಈಗಾಗ್ಲೇ ಆಫರ್‌ಗಳು ಲಭಿಸಿವೆ ಎಂದರು. ಇನ್ನು ಬಿಗ್ ಬಾಸ್ ಅಂತಿಮ ಹಂತದಲ್ಲಿದ್ದು ನಮ್ ದೋಸ್ತ್ ಹನುಮಂತ ಗೆಲ್ತಾನೆ ಅನ್ನೋ ನಂಬಿಕೆ ಇದೆ ಅಂತ ಪುನರುಚ್ಚರಿಸಿದರು

ಮನೋರಂಜನೆ ರಾಜ್ಯ