
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರಗಳ ನಡುವೆ ಗುದ್ದಾಟ ನಡೆಯುತ್ತಿದ್ದರೆ ಇದೀಗ ಜಿಲ್ಲೆ ಮಟ್ಟದರಲ್ಲೂ ಮುಖಂಡರಗಳ ನಡುವೆ ಮುಸುಕಿ ಗುದ್ದಾಟ ಆರಂಭವಾಗಿದೆ. ಬಿಜೆಪಿಯ ಪ್ರಯೋಗಶಾಲೆ ಎಂದು ಹೇಳುವ ಮಂಗಳೂರಿನಲ್ಲೂ ಇದೀಗ ಬಣಗಳ ಬಡಿದಾಟ ಆರಂಭವಾಗಿದೆ ಎಂದು ಹೇಳಲಾಗಿದೆ.


ಇತ್ತೀಚೆಗೆ ಮಂಗಳೂರಿನಲ್ಲಿ ಫುಡ್ ಫೆಸ್ಟಿವಲ್ ಸಂದರ್ಭ ಈ ಬಣ ಬಡಿದಾಟ ಸ್ವಲ್ಪ ಜೋರಾಗಿಯೇ ನಡೆದಿದ್ದು, ಸಂಸದ ಹಾಗೂ ಮಂಗಳೂರು ದಕ್ಷಿಣ ಶಾಸಕರ ಬೆಂಬಲಿಗರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ಗೆ ಕಾರಣವಾಗಿದೆ. ಮಂಗಳೂರು ಆಹಾರ ಉತ್ಸವದಲ್ಲಿ ಶಾಸಕ ವೇದವ್ಯಾಸ ಕಾಮತ್‌ಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಬೆಂಬಲಿಗರು ನಿಂದಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿದೆ.
ಇದೇ ವಿಚಾರವಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಆರೋಪ ಪ್ರತ್ಯಾರೋಪಗಳು ಶುರುವಾಗಿವೆ. ಶಾಸಕ ವೇದವ್ಯಾಸ್ ಕಾಮತ್‌ನ್ನು ಸಂಸದರ ಬೆಂಬಲಿಗರು ನಿಂದಿಸಿರುವುದು ಸಂಸದ ವರ್ಸಸ್ ಶಾಸಕರ ಬೆಂಬಲಿಗರ ನಡುವೆಯೂ ಮನಸ್ತಾಪಕ್ಕೆ ಕಾರಣವಾಗಿದೆ.ಮಂಗಳೂರು ಪುಡ್‌ಫೆಸ್ಟ್ ದ.ಕ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ನಡೆಯುತ್ತಿದೆ. ಶಾಸಕ ವೇದವ್ಯಾಸ್ ಕಾಮತ್ ಆಹ್ವಾನದ ಮೇರೆಗೆ ಫುಡ್ ಫೆಸ್ಟ್‌ಗೆ ಸಂಸದ ಕ್ಯಾ. ..ಬ್ರಿಜೇಶ್ ಚೌಟ ಬೆಂಬಲಿಗರೊಂದಿಗೆ ಆಗಮಿಸಿದರು. ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ಸಂಸದರನ್ನು ಸ್ಮರಣಿಕೆ ನೀಡಲೆಂದು ವೇದಿಕೆಗೆ ಆಹ್ವಾನಿಸಿದ್ದರು. ಆದರೆ ವೇದಿಕೆ ಏರಿ ಸ್ಮರಣಿಕೆ ಸ್ವೀಕರಿಸಲು ಸಂಸದರು ನಿರಾಕರಿಸಿದರು ಎನ್ನುವುದು ಆರೋಪ.

ಇದೇ ವಿಚಾರಕ್ಕೆ ಸಂಸದ ಕ್ಯಾ.ಚೌಟ ಬೆಂಬಲಿಗ ಹಾಗೂ ಶಾಸಕ ಕಾಮತ್ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು. ಕಾಮತ್ ಬೆಂಬಲಿಗರಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬಣಕ್ಕೆ ಎಚ್ಚರಿಕೆ ನೀಡಿದ ವಿದ್ಯಮಾನವೂ ನಡೆದಿದೆ. ‘ಸಂಸದ ಬ್ರಿಜೇಶ್ ಚೌಟರೇ ಎಂಥ ನೀಚರನ್ನು ಸಾಕುತ್ತಿದ್ದೀರಿ ನೀವು’ ಎಂದು ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. . ‘ಪುಡ್ ಫೆಸ್ಟ್‌ನಲ್ಲಿ ನಿಮ್ಮ ಜೊತೆಗಿದ್ದ ಇನ್ನೂ ಮೀಸೆ ಚಿಗುರದ ಪುಡಾರಿಯೋರ್ವ ನಿಮ್ಮ ಮುಂದೆಯೇ ಹಿರಿಯ ಶಾಸಕರ ಮೇಲೆಯೇ ಕೈಯೇರಿಸಿ ರೇಗುವಾಗ ನೋಡುತ್ತಾ ಸುಮ್ಮನಿದ್ದೀರಲ್ವಾ?, ನಿಮ್ಮ ಚೇಲಾಗಳು ಗೂಂಡಾಗಳ ಹಾಗೆ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗುವಾಗ ಅವರಿಗೆ ಬುದ್ದಿ ಹೇಳದ ನೀವೆಂತಾ ಸಂಸದರು?, ನೆನಪಿಡಿ, ನೀವು ಹಾಗೂ ನಿಮ್ಮ ಚೇಲಾಗಳು ಬಂದಿದ್ದೇ ಮೊನ್ನೆಮೊನ್ನೆಯಿಂದ, ಅನೇಕ ವರ್ಷಗಳಿಂದ ಸಾಮಾನ, ಕಾರ್ಯಕರ್ತರು ಪಕ್ಷ ಕಟ್ಟಿದ್ದಾರೆ.
ನಿಮ್ಮ ಬಕೆಟುಗಳನ್ನು ತೆಪ್ಪಗಿರಿಸಿದರೆ ಸರಿ. ನಮ್ಮ ನಾಯಕರು ಸುಮ್ಮನಿರಬಹುದು, ಆದರೆ ಕಾರ್ಯಕರ್ತರು ಇನ್ನು ಸುಮ್ಮನಿರಲ್ಲ’ ಎಂದು ಎಚ್ಚರಿಕೆ ಪೋಸ್ಟ್ ಹಾಕಲಾಗಿದೆ.