ಚೆನ್ನೈನಲ್ಲಿ ನಿನ್ನೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 166 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ 19.2 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ತಿಲಕ್ ವರ್ಮಾ 72 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದು, ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ವಾಷಿಂಗ್ಟನ್ ಸುಂದರ್ 26 ರನ್‌ಗಳ ಕೊಡುಗೆ ನೀಡಿದ್ದು, ತಂಡವನ್ನು ಮುನ್ನಡೆಸಲು ಸಹಾಯ ಮಾಡಿದರು.ಅಂತಿಮ ಹಂತದಲ್ಲಿ ರವಿ ಬಿಷ್ಣೋಯ್ 5 ಎಸೆತಗಳಲ್ಲಿ 9 ರನ್ ಬಾರಿಸಿ ಅಜೇಯರಾಗಿ ಉಳಿದು, ಭಾರತದ ಗೆಲುವಿಗೆ ನೆರವಾದರು. ಈ ಜಯದೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.




