ಮಹಾ ಕುಂಭಮೇಳದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವು…ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಮಹಾ ಕುಂಭಮೇಳದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವು…ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲಗಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಈವರೆಗೂ 30 ಭಕ್ತರು ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಯಾಗ್‌ ರಾಜ್ ಡಿಐಜಿ ವೈಭವ್ ಕೃಷ್ಣ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ಮೃತರ ಸಂಖ್ಯೆ ಇನ್ನೂ ಏರಿಕೆಯಾಗುತ್ತಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ವೇಳೆ ಸಂಗಮದಲ್ಲಿ ಕಾಲ್ತುಳಿತದಂತಹ ಘಟನೆ ಸಂಭವಿಸಿದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಇನ್ನು ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯಕ್ಕೆ ಧಾವಿಸಿದೆ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸಂಭವಿಸಿದ ಮಹಾಕುಂಭ ಮೇಳದ ವೇಳೆ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. 25 ಜನರನ್ನು ಗುರುತಿಸಲಾಗಿದ್ದು, ಐವರನ್ನು ಇನ್ನು ಗುರುತಿಸುವ ಕೆಲಸ ನಡೆಯುತ್ತಿದೆ ಎಂದು ಮಹಾಕುಂಭದ ಡಿಐಜಿ ವೈಭವ್ ಕೃಷ್ಣ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ:

ಇನ್ನು ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸರ್ವದರ್ಶನ ಟಿಕೆಟ್​​ ಖರೀದಿಯ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟ ಭಕ್ತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿತ್ತು.
ವೈಕುಂಠ ಏಕಾದಶಿ ಹಿನ್ನೆಲೆ ತಿಮ್ಮಪ್ಪನ ದರ್ಶನಕ್ಕೆಂದು ದೇಶದ ವಿವಿಧೆಡೆಯಿಂದ ಭಕ್ತರು ತಿರುಪತಿಗೆ ಆಗಮಿಸಿದ್ದಾರೆ. ಸರ್ವದರ್ಶನ ಟಿಕೆಟ್​ ವಿತರಣೆಯ ವೇಳೆ ಜನರು ಏಕಾಏಕಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. ಇದರಲ್ಲಿ 5 ಜನ ಮಹಿಳೆಯರು ಸೇರಿ 6 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದು. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಭಕ್ತರ ಕುಟುಂಬಕ್ಕೆ ತಲಾ 25,00,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಸರ್ಕಾರ ತಿಳಿಸಿತ್ತು. ಈ ಬಗ್ಗೆ ಮಾಹಿತಿ ನೀಡಿದ್ದ ರಾಜ್ಯ ಕಂದಾಯ ಮತ್ತು ಮುಜರಾಯಿ ಇಲಾಖೆಯ ಸಚಿವ ಎ.ಸತ್ಯ ಪ್ರಸಾದ್, ಮೃತ ಭಕ್ತರ ಕುಟುಂಬಗಳ ಜೊತೆಗೆ ನಾವಿದ್ದೇವೆ ಎಂದು ತಿಳಿಸಿದ್ದರು. ಮೃತರ ಕುಟುಂಬಗಳಿಗೆ ನೆರವಾಗಲು ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಸಿಎಂ ಚಂದ್ರಬಾಬು ನಾಯ್ಡು ಅವರು ಸಂತ್ರಸ್ತರ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದರು.

ರಾಷ್ಟ್ರೀಯ