
ಮಂಗಳೂರು ಜಂಕ್ಷನ್ ರೈಲ್ವೇ ಸ್ಟೇಷನ್ ಕ್ರಾಸ್ ರಸ್ತೆ ಬಳಿಯ ದರ್ಬಾರ್ ಹಿಲ್ ಎಂಬಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾಜ್ ಹಸನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತನನ್ನು ವೈದ್ಯಕೀಯ ತಪಾಸಣೆಗೆ ಒಳಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವೆ ಮಾಡಿರುವುದು ದೃಢಪಟ್ಟಿದೆ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಕಲಂ-27 (ಬಿ) ಅಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಕುದ್ರೋಳಿ ಆಟದ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕುದ್ರೋಳಿ ಪುಸಲರ್ ಗಲ್ಲಿ ನಿವಾಸಿ ಝಿಯಾ ಯಾನೇ ಮೊಹಮ್ಮದ್ ಝಿಯಾದ್ (22) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಕಲಂ-27 (ಬಿ) ಅಡಿ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಗರದ ಪಬ್ಬಾಸ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ಫನ್ನೀರ್ ನಿವಾಸಿ ಮೊಹಮ್ಮದ್ ಮನ್ಸೂದ್ ಸಾಗ್ (22) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಬರ್ಕೆ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.