ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಸೇರಿದಂತೆ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ, ಭಕ್ತರ ಸುರಕ್ಷತೆಗಾಗಿ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ವಾಹನ ಸಂಚಾರ ನಿರ್ಬಂಧಿಸಿ, ವಿಐಪಿ ಪಾಸ್‌ಗಳನ್ನು ರದ್ದು ಮಾಡಲಾಗಿದೆ. ಫೆಬ್ರವರಿ 4ರವರೆಗೆ ಹೊರಗಿನ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಧಾರ್ಮಿಕ ರಾಷ್ಟ್ರೀಯ