
Bantwala: ಫ್ಯಾನ್ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯೊಂದು ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಫೆ.7 (ಶುಕ್ರವಾರ) ರಂದು ನಡೆದಿದೆ.


ಅರಳ ನಿವಾಸಿ ಭವಾನಿಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್‌ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.