ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದು ಪಾದಾಚಾರಿ ವ್ಯಕ್ತಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ವರದಿಯಾಗಿದೆ.

ಕನಮಜಲು ಕೋಡಿಯ ರಾಮಯ್ಯ ಶೆಟ್ಟಿ (67) ಮತ್ತು ಜನಾರ್ದನ ಶೆಟ್ಟಿ (50) ಮೃತರು. ಢಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದೆ.

ಶನಿವಾರ ರಾತ್ರಿ ಕನಕಮಜಲಿನಲ್ಲಿ ನಡೆದ ಏಕಾಹ ಭಜನೆಗೆ ಜನಾರ್ದನ ಶೆಟ್ಟಿ ಹಾಗೂ ರಾಮ ಶೆಟ್ಟಿ ಅವರು ಮುಖ್ಯ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರೊಂದು ವೇಗವಾಗಿ ಬಂದು ಇವರಿಬ್ಬರಿಗೆ ಢಿಕ್ಕಿ ಹೊಡೆದಿದೆ. ರಸ್ತೆ ಬದಿಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಬಳಿಕ ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಲ್ಲಿ ಇಂದು ಚಿಕಿತ್ಸೆ ಫಲಿಸದೆ ಅವರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ