ಕಾಸರಗೋಡು: ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ಕೊಲೆ

ಕಾಸರಗೋಡು: ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ಕೊಲೆ

ಕಾಸರಗೋಡು: ಕಾವಲುಗಾರರೋರ್ವರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಉಪ್ಪಳ ಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪಯ್ಯನ್ನೂರು ನಿವಾಸಿ ಸುರೇಶ್ (45) ಕೊಲೆಗೀಡಾದವರು. ಉಪ್ಪಳ ಪೇಟೆಯಲ್ಲಿ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಸುರೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ತಡರಾತ್ರಿ ಮೃತಪಟ್ಟರು.

ಉಪ್ಪಳ ನಿವಾಸಿ ಸವಾದ್ ಎಂಬಾತ ಈ ಕೃತ್ಯ ನಡೆಸಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಉಪ್ಪಳ ದ ಫ್ಲ್ಯಾಟ್ ವೊಂದರ ಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತಿದ್ದ ಸುರೇಶ್ ಮತ್ತು ಸವಾದ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಕೊನೆಗೊಂಡಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ರಾಜ್ಯ