ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ‘ಮೇಳ’ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ’ ಎಂದು ದೂರಿದರು.

ರಾಜ್ಯ