ಮುಂಬೈ: ಮುಂಬೈ ವಿಮಾನ ನಿಲ್ದಾಣದ ಶೌಚಾಲಯದ ಕಸದ ಬಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಮಂಗಳವಾರ ರಾತ್ರಿ ಬೆಳಕಿಗೆ ಬಂದಿದೆ.


ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ಒಳಗಿನ ಶೌಚಾಲಯದಲ್ಲಿ ನೌಕರರು ಸ್ವಚ್ಛತೆ ಕಾರ್ಯವನ್ನು ನಡೆಸುತ್ತಿದ್ದಾಗ ಕಸದ ಬಟ್ಟಿಯಲ್ಲಿ ಶಿಶುವಿನ ಶವ ಪತ್ತೆಯಾಗಿದೆ. ತಕ್ಷಣವೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಆತಂಕ ಮೂಡಿಸಿದ್ದು, ಆರೋಪಿಯನ್ನು ಪತ್ತೆಹಚ್ಚಲು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವೀಕ್ಷಿಸುತ್ತಿದ್ದಾರೆ. ಶಿಶುವಿನ ಲಿಂಗ ಮತ್ತು ಮರಣದ ಕಾರಣ ತಿಳಿದುಕೊಳ್ಳಲು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ಬಗ್ಗೆ ಮುಂಬೈ ಪೊಲೀಸ್ ಅಧಿಕಾರಿಗಳು ಮಾತನಾಡಿ, “ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶೀಘ್ರವೇ ಆರೋಪಿಯನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.ಪೋಲೀಸರ ಪ್ರಾಥಮಿಕ ತನಿಖೆಯಿಂದ ಶಿಶುವನ್ನು ವಿಮಾನ ನಿಲ್ದಾಣಕ್ಕೆ ತಂದ ವ್ಯಕ್ತಿಯ ಗುರುತು ಪತ್ತೆ ಮಾಡಲು ವಿಶೇಷ ತಂಡಗಳನ್ನು ರಚಿಸಲಾಗಿದೆ.