ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು 2025 ಏಪ್ರಿಲ್ 8ರಂದು ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ಬಾರಿ ಸಹ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೀಗ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಫಲಿತಾಂಶದ ನಿರೀಕ್ಷೆ ತೀವ್ರವಾಗಿದೆ.

ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ https://karresults.nic.in ನಲ್ಲಿ ತಮ್ಮ ನೋಂದಣಿ ಸಂಖ್ಯೆ ಬಳಸಿ ಮಾರ್ಕ್‌ಶೀಟ್‌ ಪರಿಶೀಲಿಸಬಹುದು.

ವಿದ್ಯಾರ್ಥಿಗಳಿಗೆ ಶುಭಾಶಯಗಳು – ನಿಮ್ಮ ಭವಿಷ್ಯ ಬೆಳಗಲಿ!

ಶೈಕ್ಷಣಿಕ