ದಿನಾಂಕ 03-06-2025ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ (Graduation Day – 2025) ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಡಾ. ಜ್ಯೋತಿ ಆರ್. ಪ್ರಸಾದ್, ಕಾರ್ಯದರ್ಶಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇವರು ಉಪಸ್ಥಿತರಿರುವರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಸುಬ್ರಮಣ್ಯ ಕೆ.ಎನ್., ಪ್ರಾಂಶುಪಾಲರು, ಆರ್.ವಿ. ಕಾಲೇಜು, ಬೆಂಗಳೂರು ಇವರು ಆಗಮಿಸಲಿದ್ದಾರೆ. ಸಮಾರಂಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ 350 ವಿದ್ಯಾರ್ಥಿಗಳು ಪದವಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಅಲ್ಲದೆ ಈ ಬಾರಿಯ ಬಿ.ಇ. ಮತ್ತು ಎಂ.ಟೆಕ್ ರ್ಯಾಂಕ್ ವಿಜೇತ ವಿದ್ಯಾರ್ಥಿಗಳು ಮತ್ತು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ ಪ್ರೊಫೆಸರ್ಗಳನ್ನು ಸನ್ಮಾನಿಸಲಾಗುವುದು. ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಕಾಲೇಜಿನ ಸಿ.ಇ.ಒ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಇವರ ಉಪಸ್ಥಿತಿಯಲ್ಲಿ ತಿಳಿಸಿರುತ್ತಾರೆ.

