ಲೀಡ್ಸ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಭಾರತದ ವಿರುದ್ಧ 5 ವಿಕೆಟ್ ಗಳ ಸುಲಭ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ , ನಾಯಕ ಶುಭ್ಮನ್ ಗಿಲ್ ಮತ್ತು ವಿಕೆಟ್ ಕೀಪರ್ ರಿಷಬ್ ಪಂತ್ ಶತಕದ ನೆರವಿನಿಂದ 471 ರನ್ ಗಳಿಸಿತು.


ಅದಕ್ಕೆ ಉತ್ತರವಾಗಿ ಇಂಗ್ಲೆಂಡ್ 364 ರನ್ ಗಳಿಸಿ ಅಲ್ ಔಟ್ ಆಯಿತು ಭಾರತದ ಪರ ಜಸ್ಪ್ರೀತ್ ಬುಮ್ರಾ 5 ವಿಕೇಟ್ ಪಡೆದರು. ಎರಡನೇ ಇನ್ನಿಂಗ್ಸ್ ರಿಷಬ್ ಪಂತ್ ಮತ್ತು ಕೆ.ಎಲ್ ರಾಹುಲ್ ಶತಕ ಗಳಿಸಿ ಭಾರತದ ಮೊತ್ತ 364ಕ್ಕೆ ತಲುಪಿಸಿದರು. 371 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 14 ಓವರ್ ಬಾಕಿ ಇರುವಾಗಲೇ 5 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.ಪಂತ್ ಎರಡೂ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದರೂ ಭಾರತ ಗೆಲ್ಲದೆ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು.