ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಎನ್.ಎಸ್.ಎಸ್. ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಎನ್.ಎಸ್.ಎಸ್. ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಎನ್.ಎಸ್.ಎಸ್. ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ ೨೪-೦೬-೨೦೨೫ರಂದು ಆಯೋಜಿಸಲಾಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಇಒ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಯೋಗಗುರು ಮತ್ತು ಎಂ.ಬಿ.ಎ. ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ ಹಾಗೂ ಎನ್.ಎಸ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಸಿಇಒ ಡಾ. ಉಜ್ವಲ್ ಯು.ಜೆ. ಅವರು ಮಾತನಾಡಿ ಮಾನಸಿಕ ಹಾಗೂ ಶಾರೀರಿಕ ಆರೋಗ್ಯದ ಮೇಲೆ ಯೋಗದ ಪ್ರಯೋಜನ ಮತ್ತು ದೈನಂದಿನ ಜೀವನದಲ್ಲಿ ಯೋಗದ ಪ್ರಾಮುಖ್ಯತೆಯನ್ನು ವಿವರಿಸಿದರು. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಯೋಗದ ವೈಜ್ಞಾನಿಕ ಹಾಗೂ ಜೀವನಮುಖಿ ಅಂಶಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ವಕ್ತಾರರಾದ ಯೋಗಗುರು ಪ್ರೊ. ಕೃಷ್ಣಾನಂದ ಎ. ಅವರು ಹಲವು ಯೋಗಾಸನಗಳು, ಚಕ್ರಧ್ಯಾನ ಮತ್ತು ಪ್ರಾಣಾಯಾಮಗಳ ಪ್ರಾತ್ಯಕ್ಷಿತೆ ನೀಡಿ, ತಾತ್ವಿಕ ವಿವರಗಳೊಂದಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ. ಅವರು ಎಲ್ಲಾ ಅತಿಥಿಗಳು, ಭಾಗವಹಿಸಿದ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಎನ್.ಎಸ್.ಎಸ್. ಸಂಯೋಜಕಿ ಪ್ರೊ. ನಸೀಮಾ ಸಿ.ಎ. ಅವರು ನಿರ್ವಹಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಎನ್.ಎಸ್.ಎಸ್. ಸಂಯೋಜಕರಾದ ಪ್ರೊ. ಲಕ್ಷ್ಮೀನಾರಾಯಣ ಎನ್. ಹಾಗೂ ಕಾಲೇಜಿನ ಆಡಳಿತಾಧಿಕಾರಿ ಶ್ರೀ ನಾಗೇಶ್ ಕೊಚ್ಚಿ ಅವರು ಕಾರ್ಯಕ್ರಮವು ಸುಗಮವಾಗಿ ನಡೆಯಲು ಸಹಕರಿಸಿದರು.

ಯೋಗ ಕಾರ್ಯಕ್ರಮದಲ್ಲಿ ವಿಭಾಗದ ಡೀನ್‌ಗಳು, ವಿಭಾಗ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು ಭಾಗವಹಿಸಿ ಯೋಗ ಅಭ್ಯಾಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಡಾ. ಜ್ಯೋತಿ ಆರ್. ಪ್ರಸಾದ್ ಕಾರ್ಯದರ್ಶಿ, ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಡಾ. ಅಭಿಜ್ಞ ಕೆ., ನಿರ್ದೇಶಕರು, ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ) ಮತ್ತು ಮೌರ್ಯ ಆರ್. ಪ್ರಸಾದ್, ಎಕ್ಸೆಕ್ಯುಟಿವ್ ಡೈರೆಕ್ಟರ್, ಕೆವಿಜಿಡಿಸಿ & ಎಚ್, ಸುಳ್ಯ ಅವರು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಯೋಗದ ಪ್ರಯೋಜನ ಪಡೆದು ಆರೋಗ್ಯಪೂರ್ಣ ಜೀವನದತ್ತ ಹೆಜ್ಜೆ ಇಟ್ಟರು. ಈ ಯೋಗ ದಿನಾಚರಣೆಯು ಭಾಗವಹಿಸಿದ ಎಲ್ಲರಿಗೂ ಯೋಗದ ಪ್ರಾಮುಖ್ಯತೆಯ ಅರಿವು ಮೂಡಿಸಲು ಸಹಾಯವಾಯಿತು.

ಅಂತರಾಷ್ಟ್ರೀಯ ಆಧ್ಯಾತ್ಮ