ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಲಿಸ್ ಇಲಾಖೆಯ ಜೊತೆಗೆ ಸಾರ್ವಜನಿಕರ ಪಾತ್ರವೂ ಮುಖ್ಯ- ಸರ್ಕಲ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯಕ್

ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ನಡೆಯಿತು.
ಸುಳ್ಯ ಪೋಲಿಸ್ ವ್ರತ್ತ ನಿರೀಕ್ಷಕ ತಿಮ್ಮಪ್ಪ ನಾಯಕ್ , ಹಾಗೂ ಸುಳ್ಯ ಠಾಣಾ ಪೋಲಿಸ್ ಉಪ ನಿರೀಕ್ಷಕ ಸಂತೋಷ್
ಮಾಹಿತಿ ನೀಡಿದರು. ಎ.ಓ.ಎಲ್.ಇ ಕಮಿಟಿ ‘ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ,
ವಿದ್ಯಾಸಂಸ್ಥೆಗಳ ಆಡಳಿತ ಅಧಿಕಾರಿ ಭವಾನಿ ಶಂಕರ್ ಅಡ್ತಲೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಅಟೋಮೊಬೈಲ್ ವಿಭಾಗದ ಮುಖ್ಯಸ್ಥ ಎಂ.ಎನ್ ಚಂದ್ರಶೇಖರ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ.ಎನ್, ಕಚೇರಿ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಉಪಸ್ಥಿತರಿದ್ದರು. ಉಪನ್ಯಾಸಕ ದೀಕ್ಷಿತ್ ಕುಮಾರ್ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಸ್ವಾಗತಿಸಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ ವಂದಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.

