ಪೋಷಕರು ಸಂಸ್ಥೆಯ ಮೇಲಿಟ್ಟಿರುವ ನಂಬಿಕೆಗೆ ಸಂಸ್ಥೆ ಬದ್ಧವಾಗಿದೆ – ಡಾ.ಉಜ್ವಲ್ ಯು.ಜೆ


ದುಡಿಯುವ ಆಸಕ್ತಿ ಇರುವವರಿಗೆ ನಿರುದ್ಯೋಗ ಸಮಸ್ಯೆ ಇಲ್ಲ. – ಭವಾನಿಶಂಕರ ಅಡ್ತಲೆ.
ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಎ.ಓ.ಎಲ್.ಇ ಕಮಿಟಿ ‘ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪೋಷಕರು ನಮ್ಮ ಸಂಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನಾವು ಬದ್ಧರಿದ್ದೇವೆ ಎಂದರು.
ವಿದ್ಯಾಸಂಸ್ಥೆಗಳ ಆಡಳಿತ ಅಧಿಕಾರಿ ಭವಾನಿ ಶಂಕರ್ ಅಡ್ತಲೆ ಮಾತನಾಡಿ ಡಿಪ್ಲೊಮಾ ಮಾಡಿದವರಿಗೆ ಸಾಕಷ್ಟು ಉದ್ಯೋಗವಕಾಶಗಳಿವೆ, ದುಡಿಯುವ ಆಸಕ್ತಿ ಇದ್ದರೆ ಉದ್ಯೋಗಕ್ಕೆ ಯಾವುದೇ ಕೊರತೆ ಇಲ್ಲ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯ ನೀತಿ ನಿಯಮಗಳು ಹಾಗೂ ಸಂಸ್ಥೆಯಲ್ಲಿ ಸಿಗುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.




ವೇದಿಕೆಯಲ್ಲಿ ಅಟೋಮೊಬೈಲ್ ವಿಭಾಗದ ಮುಖ್ಯಸ್ಥ ಎಂ.ಎನ್ ಚಂದ್ರಶೇಖರ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ.ಎನ್, ಕಚೇರಿ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಉಪಸ್ಥಿತರಿದ್ದರು. ಉಪನ್ಯಾಸಕ ದೀಕ್ಷಿತ್ ಕುಮಾರ್ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಸ್ವಾಗತಿಸಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ ವಂದಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಭವಾನಿ ಶಂಕರ ಅಡ್ತಲೆಯವರನ್ನು ಗೌರವಿಸಲಾಯಿತು.