ಬೆಂಗಳೂರು ನಗರದಲ್ಲಿ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ 60 ಸಾವಿರ ಪ್ರೇಕ್ಷಕರ ಆಸನ ಸಾಮರ್ಥ್ಯವಿರುವ ಹೊಸ ಸ್ಟೇಡಿಯಂ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 50 ಎಕರೆ ಭೂಮಿ ಈಗಾಗಲೇ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ತಿಳಿಸಿದರು.


ನಗರದ ಅಗತ್ಯಗಳಿಗೆ ತಕ್ಕಂತೆ ಯೋಜನೆ ರೂಪಿಸಲಾಗಿದ್ದು, 100 ಕೋಟಿ ವೆಚ್ಚದ ಸಂಶೋಧನಾ ಕೇಂದ್ರ, 6ನೇ ಹಂತದ ಕಾವೇರಿ ಯೋಜನೆ ಸಿದ್ಧತೆ, ಕಸದ ಸಮಸ್ಯೆ ತ್ವರಿತ ಪರಿಹಾರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಸ್ಟೇಡಿಯಂ ನಿರ್ಮಾಣಕ್ಕೆ ಭವ್ಯ ವಿನ್ಯಾಸಗಳು ಲಭ್ಯವಿದ್ದು, ನಿರ್ಮಲಾನಂದನಾಥ ಶ್ರೀಗಳ ಸಲಹೆ ಪಡೆಯಲಾಗುವುದು ಎಂದು ಡಿಸಿಎಂ ಹೇಳಿದರು.