ಜೂನ್ 30 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಮಂಟಪದ ಶಂಕುಸ್ಥಾಪನೆ

ಜೂನ್ 30 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಮಂಟಪದ ಶಂಕುಸ್ಥಾಪನೆ

ಸುಬ್ರಹ್ಮಣ್ಯ: ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ “ಆಶ್ಲೇಷ ಮಂಟಪದ ಶಂಕುಸ್ಥಾಪನಾ ಸಮಾರಂಭ” ಜೂನ್ 30, 2025ರ ಸೋಮವಾರದಂದು ಮಧ್ಯಾಹ್ನ 11.30ಕ್ಕೆ ನೆರವೇರಲಿದೆ.ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಪತಿಗಳು ಮಾನ್ಯ ಶ್ರೀ ಯು.ಟಿ. ಖಾದರ್ ,ಶ್ರೀ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ.ಶಂಕುಸ್ಥಾಪನೆಯ ಮಹತ್ವದ ಕಾರ್ಯವನ್ನು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಮಾನ್ಯ ಶ್ರೀ ರಾಮಲಿಂಗ ರೆಡ್ಡಿ ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ವಹಿಸಲಿದ್ದಾರೆ.

ಧಾರ್ಮಿಕ