ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ರೋಚಕ ಪೈಪೋಟಿಗೆ ಇಳಿದಿವೆ. ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಭಾರತ 58 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದು, ಗೆಲುವಿಗೆ ಇನ್ನೂ 135 ರನ್ ಅಗತ್ಯವಿದೆ.

ಭಾರತದ ಆರಂಭಿಕ ಬ್ಯಾಟರ್‌ಗಳು ಇಂಗ್ಲೆಂಡ್ ಬೌಲರ್‌ಗಳ ತೀವ್ರ ಆಕ್ರಮಣಕ್ಕೆ ಶರಣಾಗಿದ್ದು, ಟಾಪ್ ಆರ್ಡರ್ ಸಂಪೂರ್ಣವಾಗಿ ಕುಸಿದಿದೆ. ಈ ವೇಳೆ ಅನುಭವಿ ಆಟಗಾರ ಕೆಎಲ್ ರಾಹುಲ್ 33 ರನ್ ಗಳಿಸಿ ಅಜೇಯವಾಗಿ ಕ್ರೀಸ್‌ನಲ್ಲಿ ಉಳಿದಿದ್ದಾರೆ.

ಇದಕ್ಕೂ ಮೊದಲು ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 192 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತದ ವಾಷಿಂಗ್ಟನ್ ಸುಂದರ್ ತಮ್ಮ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ 4 ವಿಕೆಟ್‌ಗಳನ್ನು ಪಡೆದು ಇಂಗ್ಲೆಂಡ್‌ನನ್ನು ಕಡಿಮೆ ಮೊತ್ತದಲ್ಲಿ ತಗ್ಗಿಸಲು ಪ್ರಮುಖ ಪಾತ್ರವಹಿಸಿದರು.