ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನದಿಗಳು ಅಪಾಯ ಮಟ್ಟಕ್ಕೆ ತಲುಪಿ ಹರಿಯುತ್ತಿದೆ. ಅಲ್ಲಲ್ಲಿ ಗುಡ್ಡಗಳು ಕುಸಿಯುತ್ತಿದ್ದು ತಗ್ಗು ಪ್ರದೇಶಕ್ಕೆ ನೀರು ನುಗ್ಗುತ್ತಿದೆ.



ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ , ದಕ್ಷಿಣ ಕನ್ನಡ, ಕಾಸರಗೋಡು , ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ಕಾಲೇಜು) ರಜೆ ಘೋಷಣೆ ಮಾಡಲಾಗಿದೆ.