ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ದೇಶ ಸಜ್ಜಾಗುತ್ತಿರುವ ಸಂದರ್ಭದಲ್ಲಿ, ಕೇಂದ್ರ ಸಂಸ್ಕೃತಿ ಸಚಿವಾಲಯ ‘ಸೆಲ್ಫಿ ವಿತ್ ತಿರಂಗಾ’ ಅಭಿಯಾನಕ್ಕೆ ಕರೆ ನೀಡಿದೆ. ಆಗಸ್ಟ್ 11ರಿಂದ 15ರವರೆಗೆ ಮನೆಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿ,ತ್ರಿವರ್ಣ ಧ್ವಜದೊಂದಿಗಿನ ಸೆಲ್ಫಿಯನ್ನು harghartiranga.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ.

ಈ ಅಭಿಯಾನದಲ್ಲಿ ಪಾಲ್ಗೊಂಡು ತಿರಂಗಾ ಸ್ವಯಂಸೇವಕರಾಗುವ ಅವಕಾಶವಿದ್ದು, ಪ್ರತಿಯೊಬ್ಬರೂ ದೇಶಭಕ್ತಿಯ ಉತ್ಸಾಹವನ್ನು ಹಂಚಿಕೊಳ್ಳುವಂತೆ ಸರ್ಕಾರ ಕೋರಿದೆ.

