ನಟ ದರ್ಶನ್‌ಗೆ ಶಾಕ್: ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ನಟ ದರ್ಶನ್‌ಗೆ ಶಾಕ್: ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಭಾರೀ ಹೊಡೆತ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಪಡಿಸಿದೆ. ನ್ಯಾ. ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಒಳಗೊಂಡ ದ್ವಿಸದಸ್ಯ ಪೀಠವು ಹೈಕೋರ್ಟ್ ಆದೇಶದಲ್ಲಿ ದೋಷವಿದ್ದು, ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. “ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ್ದು, ಆರೋಪಿಗೆ 5-ಸ್ಟಾರ್ ರೀತಿಯ ಸೌಲಭ್ಯ ಒದಗಿಸಲಾಗಿದೆ ಎಂದು ತೀವ್ರ ಟೀಕೆ ಮಾಡಿದೆ. ಜೈಲು ಸೂಪರಿಂಟೆಂಡೆಂಟ್‌ರನ್ನು ಸಸ್ಪೆಂಡ್ ಮಾಡಬೇಕಾಗಿತ್ತು ಎಂದೂ ನ್ಯಾಯಾಲಯ ಹೇಳಿದೆ.

2024ರ ಜೂನ್ 11ರಂದು ಬಂಧಿತರಾದ ದರ್ಶನ್, ನಾಲ್ಕು ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇದ್ದು, ಬೆನ್ನು ನೋವಿನ ಕಾರಣ ನೀಡಿ ಹೊರಬಂದಿದ್ದರು. ನಂತರ ಡಿಸೆಂಬರ್‌ನಲ್ಲಿ ಸಂಪೂರ್ಣ ಜಾಮೀನು ದೊರಕಿದರೂ, ಕರ್ನಾಟಕ ಸರ್ಕಾರ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ದೂರು ನೀಡಿತ್ತು. ಇದೀಗ ಜಾಮೀನು ರದ್ದು ಆದ ಕಾರಣ, ದರ್ಶನ್ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ.

ಅಪರಾಧ