ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಸಾರಿಗೆ ನಿಯಮ ಉಲ್ಲಂಘನೆ – ದಂಡ ಹಾಕುವ ಧೈರ್ಯ ಮಾಡಲಿದೆಯಾ ಇಲಾಖೆ??

ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಸಾರಿಗೆ ನಿಯಮ ಉಲ್ಲಂಘನೆ – ದಂಡ ಹಾಕುವ ಧೈರ್ಯ ಮಾಡಲಿದೆಯಾ ಇಲಾಖೆ??

ಬೆಂಗಳೂರಿಂದ ನಮ್ಮ ನಡೆ ಧರ್ಮಸ್ಥಳದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಬೈಕ್ ನಲ್ಲಿ ಹೊರಟ ಹಲವರು ಹೆಲ್ಮೆಟ್ ಧರಿಸದೆ ಸಾರಿಗೆ ನಿಯಮ ಉಲ್ಲಂಘಿಸಿರುವುದು ಅವರೇ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವಿಡಿಯೋ ಗಳಲ್ಲಿ ಕಂಡು ಬಂದಿದೆ.

ಸಾಮಾನ್ಯವಾಗಿ ಕೆಲಸಕ್ಕೆ ಹೋಗುವ ಅಥವಾ ತಮ್ಮ ಕುಟುಂಬದೊಂದಿಗೆ ಹೋಗುವಾಗ ಹೆಲ್ಮೆಟ್ ಇಲ್ಲದೆ ಇದ್ದರೆ ರಸ್ತೆಯಲ್ಲಿ ಅಲ್ಲಲ್ಲಿ ತಡೆದು ನಿಲ್ಲಿಸಿ ದಂಡ ಹಾಕುವ ಪೊಲೀಸ್ ಅಧಿಕಾರಿಗಳು ಈಗ ನಾಪತ್ತೆಯಾಗಿದ್ದಾರೆ ಎಂದು ಜನರು ಸಾಮಾಜಿಕ ಜಾಲತಾಣದಲ್ಲಿ ಟೀಕಿಸುತ್ತಿದ್ದಾರೆ.

ವಾಹನದ ಫೋಟೋ ತೆಗೆದು ಮನೆಗೆ ನೋಟಿಸ್ ನೀಡುವ ಪ್ರಕ್ರಿಯೆ ಕೂಡ ಸಾಮಾನ್ಯ ಜನರಿಗೆ ಮಾತ್ರ ಅನ್ವಯ ವಾಗುವುದೇ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಈ ರೀತಿ ಸಾರಿಗೆ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ. ಇಲ್ಲವಾದರೆ ಈ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಮತ್ತು ಅವರ ಬೆಂಬಲಿಗರಿಗೆ ಒಂದು ಕಾನೂನು ಜನ ಸಾಮಾನ್ಯರಿಗೆ ಒಂದು ಕಾನೂನು ಎನ್ನುವುದು ರುಜುವಾತು ಆಗಲಿದೆ. ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಅಪರಾಧ ರಾಜ್ಯ ರಾಷ್ಟ್ರೀಯ